Isaiah 48:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಜನರೇ, ಬಾಬಿಲೋನನ್ನು ತೊರೆಯಿರಿ. ನನ್ನ ಜನರೇ, ಕಸ್ದೀಯರಿಂದ ಓಡಿಹೋಗಿರಿ. ಈ ವರ್ತಮಾನವನ್ನು ಜನರಿಗೆ ಹರ್ಷಿಸುತ್ತಾ ತಿಳಿಸಿರಿ. ಲೋಕದ ಕಟ್ಟಕಡೆಯ ಸ್ಥಳದಲ್ಲೂ ಈ ವರ್ತಮಾನವನ್ನು ಪ್ರಕಟಿಸಿರಿ. “ಯಾಕೋಬನನ್ನು ಯೆಹೋವನು ರಕ್ಷಿಸಿದನೆಂದು” ಜನರಿಗೆಲ್ಲಾ ತಿಳಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.
Kannada BSI Bible 2016
ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆಯಿಂದ ಹಾರಿಹೋಗಿರಿ; ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ, ಭೂವಿುಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಯೆಹೋವನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ಹೇಳಿರಿ.
Kannada Bible (KNCL) BSI 2016
ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ: “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ\.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿನಿಂದ ಹೊರಡಿರಿ. ಕಸ್ದೀಯರ ಕಡೆಯಿಂದ ಓಡಿಹೋಗಿರಿ. ಹರ್ಷಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. “ಯೆಹೋವ ದೇವರು ತಮ್ಮ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾರೆ,” ಎಂದು ನೀವು ಹೇಳಿರಿ.