Isaiah 48:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಂಭವಿಸಲಿರುವ ಸಂಗತಿಗಳನ್ನು ಬಹುಕಾಲದ ಮೊದಲೇ ನಿಮಗೆ ತಿಳಿಸಿದ್ದೆನು. ಅವು ಸಂಭವಿಸುವದಕ್ಕಿಂತ ಎಷ್ಟೋ ಕಾಲದ ಮೊದಲೇ ತಿಳಿಸಿದೆನು. ನೀವು, ‘ಇವುಗಳನ್ನು ಮಾಡಿದ್ದು ನಮ್ಮ ವಿಗ್ರಹಗಳೇ, ನಮ್ಮ ಮರ ಮತ್ತು ಲೋಹದ ದೇವರುಗಳೇ ಅವುಗಳನ್ನು ಮಾಡಿದ್ದು’ ಎಂದು ನೀವು ಹೇಳದಂತೆ ಮಾಡಿದೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು.
Kannada BSI Bible 2016
ಆದದರಿಂದಲೇ ಈ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಿಂದಲೇ ಈ ಕಾರ್ಯಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ಬೊಂಬೆ, ಎರಕದ ಪುತ್ತಳಿ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು, ನಡೆಯುವದಕ್ಕೆ ಮುಂಚೆಯೇ ಪ್ರಕಟಿಸಿದೆನು.
Kannada Bible (KNCL) BSI 2016
‘ಈ ಕಾರ್ಯಗಳನ್ನು ನಡೆಸಿದ್ದು ನನ್ನ ವಿಗ್ರಹವೇ ವಿಧಿಸಿದ್ದು ನನ್ನ ಕೆತ್ತನೆಯ ಬೊಂಬೆಯೇ, ಎರಕದ ಮೂರ್ತಿಯೇ’ ಎಂದು ನೀ ಜಂಬ ಕೊಚ್ಚಿಕೊಳ್ಳದಂತೆ ಪುರಾತನ ಕಾಲದಲ್ಲೆ ನಾನಿವುಗಳನು ಮುಂತಿಳಿಸಿದೆ. ಅವುಗಳು ನೆರವೇರುವುದಕ್ಕೆ ಮುಂಚೆಯೇ ಪ್ರಕಟಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಈ ಕಾರ್ಯಗಳನ್ನು ನನ್ನ ವಿಗ್ರಹಗಳು ನಡಿಸಿದೆ. ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ,’ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ಇವು ಸಂಭವಿಸುವುದಕ್ಕಿಂತ ಮೊದಲೇ ತಿಳಿಸಿದೆನು.