Isaiah 48:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಡೆದದ್ದನ್ನು ನೀವು ಕಣ್ಣಾರೆ ನೋಡಿದಿರಿ; ಕಿವಿಯಾರೆ ಕೇಳಿದಿರಿ. ಆದ್ದರಿಂದ ನೀವು ಇತರರಿಗೆ ಸುದ್ದಿಯನ್ನು ತಿಳಿಸಬೇಕು. ನೀವು ಈವರೆಗೆ ತಿಳಿಯದಿರುವ ಗುಪ್ತವಿಷಯಗಳನ್ನು ಈಗ ನಿಮಗೆ ತಿಳಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.
Kannada BSI Bible 2016
ನೀನು ಕೇಳಿದ್ದೀ; ಇವೆಲ್ಲ ವುಗಳನ್ನು ದೃಷ್ಟಿಸು; ನೀವು ಅದನ್ನು ತಿಳಿಸದೇ ಇದ್ದಿರೋ? ಇಂದಿನಿಂದ ಹೊಸ ಸಂಗತಿಗಳನ್ನು ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನು ನಿನಗೆ ಅರು ಹುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಆಗಲೇ] ಕೇಳಿದಿಯಲ್ಲಾ, [ಈಗ] ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ, ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತ ವಿಷಯಗಳನ್ನು, ನಿನಗೆ ಅರುಹುತ್ತೇನೆ.
Kannada Bible (KNCL) BSI 2016
ನೋಡು, ನೀ ಕೇಳಿದವೆಲ್ಲ ನಡೆದಿದೆಯೊ ಇಲ್ಲವೋ ಎಂಬುದನು. ಆದರೂ ಘೋಷಿಸುತ್ತಾರೆಯೇ ನಿನ್ನವರು ಅವುಗಳನ್ನು? ಅರುಹುವೆನು ನಿನಗಿಂದಿನಿಂದ ಹೊಸ ಸಂಗತಿಗಳನು ಈವರೆಗೂ ನೀನರಿಯದ ಗುಪ್ತ ವಿಷಯಗಳನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಕೇಳಿದ್ದೀ, ಇವೆಲ್ಲವುಗಳನ್ನು ದೃಷ್ಟಿಸು. ನೀವು ಅದನ್ನು ಒಪ್ಪಿಕೊಳ್ಳದೆ ಇದ್ದೀರೋ? “ಇಂದಿನಿಂದ ಹೊಸ ಸಂಗತಿಗಳನ್ನೂ, ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನೂ ನಿನಗೆ ಹೇಳುತ್ತೇನೆ.