Isaiah 48:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವು ಬಹಳ ಕಾಲದ ಹಿಂದೆ ನಡೆದ ವಿಷಯಗಳಲ್ಲ. ಇವು ಈಗ ಸಂಭವಿಸುವ ವಿಷಯಗಳು. ಈ ದಿವಸಕ್ಕೆ ಮೊದಲು ನೀವು ಇದನ್ನು ಕೇಳಲಿಲ್ಲ. ಆದ್ದರಿಂದ ‘ನಮಗೆ ಇದೆಲ್ಲಾ ಗೊತ್ತಿದೆ’ ಎಂದು ನೀವು ಹೇಳಲಾಗದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ, “ಮೊದಲೇ ನಾನು ತಿಳಿದುಕೊಂಡಿದ್ದೆನು” ಎಂದು, ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮೊದಲು ನಾನು ನಿನಗೆ ಕೇಳಗೊಡಿಸಲಿಲ್ಲ.
Kannada BSI Bible 2016
ಆರಂಭದಲ್ಲಿ ಆಗದಿದ್ದವುಗಳು ಈಗ ಉಂಟಾಗಿವೆ; ಇಗೋ, ಅವು ನನಗೆ ತಿಳಿದಿದ್ದವೆಂದು ನೀನು ಹೇಳದಂತೆ ಈ ದಿನಕ್ಕೆ ಮುಂಚೆಯೇ ಅವು ಗಳನ್ನು ಕುರಿತು ನಿನಗೆ ಕೇಳಗೊಡಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ; ಆಹಾ, ಮೊದಲೇ ನಾನು ತಿಳಿದುಕೊಂಡಿದ್ದೆನು ಎಂದು ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮುಂಚೆ ನಾನು ನಿನಗೆ ಕೇಳಗೊಡಿಸಲಿಲ್ಲ.
Kannada Bible (KNCL) BSI 2016
ಪುರಾತನ ಕಾಲದಲ್ಲಿ ಅಲ್ಲ, ಈಗ ನಡೆಯುತ್ತಿವೆ ಈ ಘಟನೆಗಳೆಲ್ಲ. ‘ಇದೆಲ್ಲ ನನಗೆ ಮೊದಲೇ ತಿಳಿದಿತ್ತಲ್ಲಾ,’ ಎಂದು ನೀ ಕೊಚ್ಚಿಕೊಳ್ಳದಂತೆ, ನಾ ನಿನಗೆ ಮುಂತಿಳಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗಲೇ ಉಂಟಾಗುತ್ತಿವೆ, ಪುರಾತನ ಕಾಲದಲ್ಲಿ ಆಗಿಲ್ಲ; ‘ಇದೆಲ್ಲ ನನಗೆ ಮೊದಲೇ ತಿಳಿದಿತ್ತು,’ ಎಂದು ನೀನು ಕೊಚ್ಚಿಕೊಳ್ಳದಂತೆ, ನಾನು ಇವುಗಳನ್ನು ನಿನಗೆ ಮುಂತಿಳಿಸಲಿಲ್ಲ.