Isaiah 49:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಗೋ, ದೂರದೇಶಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಉತ್ತರ, ಪಶ್ಚಿಮ ದಿಕ್ಕುಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಈಜಿಪ್ಟಿನ ಅಸ್ವಾನಿನಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
Kannada BSI Bible 2016
ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್‌ ದೇಶದಿಂದ ಬರುತ್ತಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಇವರು ದೂರದಿಂದ ಬರುತ್ತಾರೆ, ಇಗೋ, ಇವರು ಬಡಗಲಿಂದ ಮತ್ತು ಪಡುವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
Kannada Bible (KNCL) BSI 2016
ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ದೂರದಿಂದ ಬರುತ್ತಾರೆ. ಇವರು ಉತ್ತರದಿಂದ ಮತ್ತು ಪಶ್ಚಿಮದಿಂದ ಇವರು ಸೀನಿಮ್ ದೇಶದಿಂದ ಬರುತ್ತಿದ್ದಾರೆ.”