Isaiah 49:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಈಗ ಚೀಯೋನ್ ಹೇಳುವುದೇನೆಂದರೆ, “ಯೆಹೋವನು ನನ್ನನ್ನು ಬಿಟ್ಟುಹೋಗಿದ್ದಾನೆ. ನನ್ನ ಒಡೆಯನು ನನ್ನನ್ನು ತೊರೆದಿದ್ದಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಯೋನ್ ನಗರಿಯಾದರೋ, “ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನೆ” ಎಂದುಕೊಂಡಳು.
Kannada BSI Bible 2016
ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಯೋನ್ ನಗರಿಯಾದರೋ - ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನಲ್ಲಾ ಅಂದುಕೊಂಡಳು.
Kannada Bible (KNCL) BSI 2016
ಜೆರುಸಲೇಮಿನ ಜನರಾದರೋ ಇಂತೆಂದರು: ಸರ್ವೇಶ್ವರ ನಮ್ಮನ್ನು ಕೈಬಿಟ್ಟಿಹನು, ಆ ಸ್ವಾಮಿ ನಮ್ಮನ್ನು ಮರೆತುಬಿಟ್ಟಿಹನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಚೀಯೋನ್ ಎಂಬಾಕೆಯು, “ಯೆಹೋವ ದೇವರು ನನ್ನನ್ನು ತಳ್ಳಿಬಿಟ್ಟಿದ್ದಾನೆ. ನನ್ನ ಯೆಹೋವ ದೇವರು ನನ್ನನ್ನು ಮರೆತುಬಿಟ್ಟಿದ್ದಾನಲ್ಲಾ!” ಎಂದುಕೊಂಡಳು.