Isaiah 49:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತನ್ನ ಪರವಾಗಿ ಮಾತನಾಡಲು ಯೆಹೋವನು ನನ್ನನ್ನು ಉಪಯೋಗಿಸುತ್ತಾನೆ. ಹದವಾದ ಕತ್ತಿಯಂತೆ ನನ್ನನ್ನು ಉಪಯೋಗಿಸುತ್ತಾನೆ. ಅದೇ ಸಮಯದಲ್ಲಿ ನನ್ನನ್ನು ತನ್ನ ಕೈಯೊಳಗೆ ಸುರಕ್ಷಿತವಾಗಿ ಇರಿಸುತ್ತಾನೆ. ಯೆಹೋವನು ನನ್ನನ್ನು ಬಾಣದಂತೆ ಉಪಯೋಗಿಸುತ್ತಾನೆ, ಅದೇ ಸಮಯದಲ್ಲಿ ಬತ್ತಳಿಕೆಯಲ್ಲಿ ನನ್ನನ್ನು ಅಡಗಿಸಿಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಬಾಯಿಯನ್ನು ಹದವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ. ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
Kannada BSI Bible 2016
ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಬಾಯನ್ನು ಹದವಾದ ಖಡ್ಗವನ್ನಾಗಿ ಮಾಡಿ ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ; ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
Kannada Bible (KNCL) BSI 2016
ಮಾಡಿದನು ನನ್ನ ನುಡಿಯನ್ನು ಹರಿತವಾದ ಖಡ್ಗವನ್ನಾಗಿ ಮುಚ್ಚಿಟ್ಟಹನು ನನ್ನನ್ನು ತನ್ನ ಕರದ ನೆರಳಿನಲ್ಲಿ ರೂಪಿಸಿಹನು ನನ್ನನ್ನು ಚೂಪಾದ ಬಾಣವನ್ನಾಗಿ, ಬಚ್ಚಿಟ್ಟಿಹನು ನನ್ನನು ತನ್ನ ಬತ್ತಳಿಕೆಯಲ್ಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ. ನನ್ನನ್ನು ಆತನು ನುಣುಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.