Isaiah 49:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಳೆದುಹೋದ ನಿನ್ನ ಮಕ್ಕಳಿಗಾಗಿ ನೀನು ವ್ಯಸನವಾಗಿದ್ದಿ. ಆದರೆ ಆ ಮಕ್ಕಳು, ‘ಈ ದೇಶವು ನಮಗೆ ಸಾಲುವದಿಲ್ಲ. ಇದಕ್ಕಿಂತ ದೊಡ್ಡ ದೇಶ ನಮಗೆ ಕೊಡು’ ಎಂದು ಕೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂತಾನವನ್ನು ಕಳೆದುಕೊಂಡವಳಾದ ನಿನ್ನ ಮಕ್ಕಳು, ‘ಸ್ಥಳವು ನನಗೆ ಸಂಕೋಚ, ನಾನು ವಾಸಿಸುವುದಕ್ಕೆ ಸ್ಥಳವಾಗುವಂತೆ ಸರಿದುಕೋ’ ಎಂದು ಆಡಿಕೊಳ್ಳುವ ಮಾತು ಇನ್ನು ಮೇಲೆ ನಿನ್ನ ಕಿವಿಗೆ ಬೀಳುವುದು.
Kannada BSI Bible 2016
ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂತಾನವನ್ನು ಕಳೆದುಕೊಂಡವಳಾದ ನಿನ್ನ ಮಕ್ಕಳು - ಸ್ಥಳವು ನನಗೆ ಸಂಕೋಚ, ನಾನು ವಾಸಿಸುವದಕ್ಕೆ ಸ್ಥಳವಾಗುವಂತೆ ಸರಿದುಕೋ ಎಂದು ಆಡಿಕೊಳ್ಳುವ ಮಾತು ಇನ್ನು ಮೇಲೆ ನಿನ್ನ ಕಿವಿಗೆ ಬೀಳುವದು.
Kannada Bible (KNCL) BSI 2016
“ಸರಿದುಕೊ, ನಮಗೆ ಸ್ಥಳಾವಕಾಶ ಸಾಲದು” ಎಂದು ಪೇಳ್ವರು ನಿನ್ನ ಕಿವಿಯೊಳು ಮಕ್ಕಳು ನೀ ಪರದೇಶಿಯಾಗಿದ್ದಾಗ ನಿನಗೆ ಹುಟ್ಟಿದಾ ಮಕ್ಕಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದುಃಖದ ಸಮಯದಲ್ಲಿ ಜನಿಸಿದ ಮಕ್ಕಳು ‘ಸ್ಥಳವು ನನಗೆ ಇಕ್ಕಟ್ಟಾಯಿತು. ನಾನು ವಾಸಿಸುವುದಕ್ಕೆ ಸ್ಥಳಕೊಡು,’ ಎಂದು ಇನ್ನೂ ನಿಮ್ಮ ವಿಚಾರಣೆಯಲ್ಲಿ ಹೇಳುತ್ತಾರೆ.