Isaiah 49:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನೀನು ನಿನ್ನ ಮನಸ್ಸಿನೊಳಗೆ, ‘ಈ ಮಕ್ಕಳನ್ನೆಲ್ಲಾ ನನಗೆ ಯಾರು ಕೊಟ್ಟರು? ಇದು ಸಂತಸದ ಸಂಗತಿ! ನಾನು ಒಬ್ಬಂಟಿಗಳಾಗಿ ದುಃಖಿಸುತ್ತಿದ್ದೆನು. ನಾನು ಸೋಲಲ್ಪಟ್ಟವಳಾಗಿ ನನ್ನ ಜನರಿಂದ ದೂರವಿದ್ದೆನು. ಹೀಗಿರುವಾಗ ಈ ಮಕ್ಕಳನ್ನೆಲ್ಲಾ ಯಾರು ಕೊಟ್ಟರು? ನಾನು ಒಬ್ಬಂಟಿಗಳಾಗಿ ಇದ್ದೆನಲ್ಲಾ! ಇಷ್ಟೆಲ್ಲಾ ಮಕ್ಕಳನ್ನು ನನಗೆ ಕೊಟ್ಟವರು ಯಾರು?”‘ ಎಂದು ಅಂದುಕೊಳ್ಳುವಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೀನು ನಿನ್ನ ಮನದೊಳಗೆ, ‘ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ, ಇವರೆಲ್ಲಿದ್ದರು?’” ಎಂದುಕೊಳ್ಳುವಿ.
Kannada BSI Bible 2016
ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನೀನು ನಿನ್ನ ಮನದೊಳಗೆ - ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು; ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ; ಇವರೆಲ್ಲಿದ್ದರು? ಅಂದುಕೊಳ್ಳುವಿ.
Kannada Bible (KNCL) BSI 2016
ಆಗ ನೀನು ಹೀಗೆಂದುಕೊಳ್ಳುವೆ ಮನದೊಳು: “ನಾನೋ ಮಕ್ಕಳನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇಷ್ಟೊಂದು ಮಕ್ಕಳನು ಕೊಟ್ಟವರಾರು ನನಗೆ? ಇವರನ್ನು ಪೋಷಿಸಿದವರಾರು ಹೀಗೆ? ಇವರೆಲ್ಲಿದ್ದರು? ನಾನೋ ಒಬ್ಬಂಟಿಗಳಾಗಿದ್ದೆ!”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನನಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನು ದುಃಖಿತ ಮತ್ತು ಬಂಜೆಯಾಗಿದ್ದೆ; ನನ್ನನ್ನು ಗಡಿಪಾರು ಮಾಡಿ ತಿರಸ್ಕರಿಸಲಾಯಿತು. ಇವುಗಳನ್ನು ತಂದವರು ಯಾರು? ನಾನು ಒಬ್ಬಂಟಿಯಾಗಿ ಉಳಿದಿದ್ದೇನೆ, ಇವರನ್ನು ಸಾಕಿದವರು ಯಾರು? ಅವರೆಲ್ಲಿದ್ದರು?’ ” ಎಂದುಕೊಳ್ಳುವೆ.