Isaiah 49:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೆಹೋವನು ಹೇಳುವುದೇನೆಂದರೆ, ಕೈದಿಗಳು ತಪ್ಪಿಸಿಕೊಳ್ಳುವರು. ಬಲಿಷ್ಠ ಸೈನಿಕನಿಂದ ಯಾರೋ ಒಬ್ಬನು ಕೈದಿಯನ್ನು ಬಿಡಿಸಿಕೊಳ್ಳುವನು. ಇದು ಹೇಗೆ ಸಾಧ್ಯ? ಹೇಗೆಂದರೆ, ನಾನೇ ನಿನ್ನ ಬದಲಾಗಿ ಯುದ್ಧ ಮಾಡುವೆನು; ನಿನ್ನ ಮಕ್ಕಳನ್ನು ರಕ್ಷಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.
Kannada BSI Bible 2016
ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ಶೂರನ ಸೆರೆಯವರೂ ಅಪಹರಿಸಲ್ಪಡುವರು, ಭೀಕರನ ಕೊಳ್ಳೆಯೂ ತೆಗೆಯಲ್ಪಡುವದು; ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.
Kannada Bible (KNCL) BSI 2016
ಸರ್ವೇಶ್ವರ ಹೀಗೆನ್ನುತ್ತಾರೆ: “ಹೌದು, ಅಪಹರಿಸಲಾಗುವುದು ಬಲಾಢ್ಯನ ಸೆರೆಯಾಳುಗಳನು ಕಸಿದುಕೊಳ್ಳಲಾಗುವುದು ಭೀಕರನ ಕೊಳ್ಳೆಯನು. ನಿನ್ನೊಡನೆ ಹೋರಾಡುವವನ ಸಂಗಡ ಹೊರಾಡುವೆ ನಾನೇ. ಅಷ್ಟೇ ಅಲ್ಲ, ನಿನ್ನ ಮಕ್ಕಳನು ಉದ್ಧರಿಸುವೆ ನಾನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರು ಹೀಗೆನ್ನುತ್ತಾರೆ: “ಶೂರನ ಸೆರೆಯವರು ಅಪಹರಿಸಲಾಗುವರು. ಭೀಕರನ ಕೊಳ್ಳೆ ಕಸಿದುಕೊಳ್ಳಲಾಗುವುದು. ಏಕೆಂದರೆ ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ, ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.