Isaiah 49:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.
Kannada BSI Bible 2016
ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವದು.
Kannada Bible (KNCL) BSI 2016
ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು: ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಹಿಂಸಕರು ಸ್ವಮಾಂಸವನ್ನೇ ಭುಜಿಸುವಂತೆ ಅನುಮತಿಸುವೆನು. ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ಸ್ವರಕ್ತವನ್ನೇ ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನೂ, ನಿನ್ನ ವಿಮೋಚಕನೂ, ಯಾಕೋಬ್ಯರ ಶೂರನೂ ಎಂದು ನರಮಾನವರೆಲ್ಲರಿಗೂ ಗೊತ್ತಾಗುವುದು.”