Isaiah 49:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಾನು “ನಾನು ಕಷ್ಟಪಟ್ಟು ಮಾಡಿದ ಕಾರ್ಯಗಳೆಲ್ಲವೂ ನಿಷ್ಪ್ರಯೋಜನವಾದವು. ನಾನು ನನ್ನನ್ನೇ ಸವೆಯಿಸಿದೆನು. ಆದರೆ ಪ್ರಯೋಜನವಾದದ್ದನ್ನು ನಾನು ಮಾಡಲಿಲ್ಲ. ನಾನು ನನ್ನ ಶಕ್ತಿಯನ್ನೆಲ್ಲಾ ಉಪಯೋಗಿಸಿದರೂ ಏನೂ ಮಾಡಲಾಗಲಿಲ್ಲ. ಆದ್ದರಿಂದ ನನಗೆ ಮಾಡಬೇಕಾದುದನ್ನು ಯೆಹೋವನೇ ತೀರ್ಮಾನಿಸಲಿ. ನನಗೆ ದೊರಕಬೇಕಾದ ಬಹುಮಾನವನ್ನು ದೇವರೇ ತೀರ್ಮಾನಿಸಲಿ” ಎಂದು ಹೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.
Kannada BSI Bible 2016
ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ನಾನು - ನನ್ನ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ವ್ರಯಮಾಡಿದ್ದು ಹಾಳೇ, ಬರಿ ಗಾಳಿಯೇ; ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ, ನನಗೆ ಲಾಭವು ನನ್ನ ದೇವರಿಂದಲೇ ಆಗುವದು ಅಂದುಕೊಂಡೆನು.
Kannada Bible (KNCL) BSI 2016
ಇಂತೆಂದುಕೊಂಡೆ ನಾನಾಗ: ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ. ನನ್ನ ಶಕ್ತಿಯೆಲ್ಲ ಶೂನ್ಯವಾಯಿತು, ನನ್ನ ಸಾಮರ್ಥ್ಯವೆಲ್ಲ ವ್ಯರ್ಥವಾಯಿತು,” ಎಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಯೆಹೋವ ದೇವರ ಬಳಿಯಲ್ಲಿಯೂ, ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.