Isaiah 49:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”
Kannada BSI Bible 2016
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.
Kannada Bible (KNCL) BSI 2016
ಮತ್ತೆ ಆತ ಇಂತೆಂದನು ನನಗೆ: “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”