Isaiah 49:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.
Kannada BSI Bible 2016
ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದೇ ಯೆಹೋವನ ನುಡಿ - ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ, ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ; ನಾನು ನಿನ್ನನ್ನು ಕಾಪಾಡುತ್ತಾ [ನನ್ನ] ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇವಿುಸಿ ಬಂದಿಗಳಿಗೆ -
Kannada Bible (KNCL) BSI 2016
ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ: “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೇಳುವುದೇನೆಂದರೆ: “ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡಿ, ಭೂಮಿಯನ್ನು ಸ್ಥಾಪಿಸುವುದಕ್ಕೂ, ಹಾಳಾಗಿರುವ ಸ್ಥಳಗಳನ್ನು ಸೊತ್ತಾಗಿ ಹೊಂದುವುದಕ್ಕೂ, ಜನರ ಒಡಂಬಡಿಕೆಯನ್ನಾಗಿಯೂ ನೇಮಿಸಿದ್ದೇನೆ.