Isaiah 5:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಪ್ರಿಯನನ್ನೂ ಆತನ ತೋಟವನ್ನೂ ಕುರಿತು ಗೀತೆಯೊಂದನ್ನು ಹಾಡುವೆ. ಫಲವತ್ತಾದ ಪ್ರದೇಶದಲ್ಲಿ ನನ್ನ ಪ್ರಿಯನಿಗೆ ದ್ರಾಕ್ಷಿತೋಟವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು.
Kannada BSI Bible 2016
ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪ್ರಿಯನನ್ನೂ ಅವನ ತೋಟವನ್ನೂ ಕುರಿತು ನನ್ನ ಪ್ರಿಯನ ಒಂದು ಗೀತವನ್ನು ನಾನು ಹಾಡುವೆ, ಕೇಳಿರಿ. ಸಾರವತ್ತಾದ ಗುಡ್ಡದ ಮೇಲೆ ನನ್ನ ಪ್ರಿಯನಿಗೆ ದ್ರಾಕ್ಷೆಯ ತೋಟವಿತ್ತು.
Kannada Bible (KNCL) BSI 2016
ಹಾಡುವೆ ನಾನೆನ್ನ ಪ್ರಿಯನಿಗೆ ಗೀತೆಯೊಂದನು ಅವನ ದ್ರಾಕ್ಷಾವನದ ಕುರಿತು ಪ್ರೇಮಗೀತೆಯನು: ಪ್ರಿಯತಮನಿಗೆ ಇತ್ತೊಂದು ದ್ರಾಕ್ಷಿಯ ತೋಟ ಫಲವತ್ತಾಗಿಹ ಗುಡ್ಡದ ಮೇಲಿನ ತೋಟ. ಆರಿಸಿ ಎಸೆದನು ಕಲ್ಲುಮುಳ್ಳುಗಳನು ಅಗೆದು ಹದಮಾಡಿದನಾತ ಗುಡ್ಡವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಿಯನ ದ್ರಾಕ್ಷಿತೋಟದ ವಿಷಯವಾದ ಹಾಡನ್ನು ನನ್ನ ಪ್ರಾಣ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದ ಬಳಿಯಲ್ಲಿ ನನ್ನ ಅತಿ ಪ್ರಿಯನಿಗೆ ದ್ರಾಕ್ಷಿ ತೋಟವಿದೆ.