Isaiah 5:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿವಸಗಳಲ್ಲಿ ಹತ್ತು ಎಕರೆ ವಿಶಾಲವಾದ ದ್ರಾಕ್ಷಿತೋಟದಲ್ಲಿ ಸ್ವಲ್ಪ ಮಾತ್ರವೇ ದ್ರಾಕ್ಷಾರಸವು ದೊರಕುವದು. ಅನೇಕ ಚೀಲ ಬೀಜವನ್ನು ಬಿತ್ತಿದರೆ ಸ್ವಲ್ಪ ಧಾನ್ಯ ಮಾತ್ರ ಸಿಗುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಹತ್ತು ಎಕರೆ ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನಿಯುವುದು. ಬಿತ್ತಿದ ಒಂದು ಖಂಡುಗ ಬೀಜದಿಂದ ಕಡಿಮೆ ದವಸವು ಬರುವುದು.
Kannada BSI Bible 2016
ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕಂದರೆ ಹತ್ತು ಎಕರೆ ಬಾಗಾಯಿತು ಭೂವಿುಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನೀಯುವದು, ಬಿತ್ತಿದ ಒಂದು ಕಂಡುಗ ಬೀಜದಿಂದ ಇಕ್ಕಳ ದವಸವು ಬರುವದು.
Kannada Bible (KNCL) BSI 2016
ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಎಂಟು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ನೂರೆಂಬತ್ತು ಲೀಟರ್ ಬೀಜಬಿತ್ತಿದರೆ, ಕೇವಲ ಹದಿನೆಂಟು ಲೀಟರ್ ಧಾನ್ಯ ಮಾತ್ರ ಸಿಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಇಪ್ಪತ್ತೆರಡು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ಸುಮಾರು ನೂರಾ ಅರವತ್ತು ಕಿಲೋಗ್ರಾಂ ಬೀಜಬಿತ್ತಿದರೆ, ಕೇವಲ ಹದಿನಾರು ಕಿಲೋಗ್ರಾಂ ಧಾನ್ಯ ಮಾತ್ರ ಸಿಗುವುದು.”