Isaiah 5:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಕುಡಿಯುತ್ತಾ ಹಾರ್ಪ್‌ವಾದ್ಯಗಳನ್ನೂ ದಮ್ಮಡಿಗಳನ್ನೂ ಕೊಳಲುಗಳನ್ನೂ ಬಾರಿಸುತ್ತಾ ನೃತ್ಯಮಾಡುವಿರಿ. ಆದರೆ ಯೆಹೋವನು ಮಾಡಿದ ಕಾರ್ಯಗಳನ್ನು ನೀವು ಗಮನಿಸುವುದಿಲ್ಲ. ಯೆಹೋವನ ಹಸ್ತವು ಅನೇಕಾನೇಕ ಕಾರ್ಯಗಳನ್ನು ಮಾಡಿದೆ. ಆದರೆ ನೀವು ಅವುಗಳನ್ನು ಲಕ್ಷಿಸುವುದಿಲ್ಲ. ಆದ್ದರಿಂದ ನಿಮಗೆ ಕೇಡಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.
Kannada BSI Bible 2016
ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಿನ್ನರಿ, ವೀಣೆ, ದಮ್ಮಡಿ, ಕೊಳಲು, ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು; ಯೆಹೋವನ ಕೆಲಸವನ್ನೋ ಅವರು ಲಕ್ಷಿಸರು, ಆತನ ಹಸ್ತಕಾರ್ಯವನ್ನು ಆಲೋಚಿಸರು.
Kannada Bible (KNCL) BSI 2016
ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ಮತ್ತು ಮದ್ಯಪಾನ ಇರುವುವು. ಆದರೆ ಯೆಹೋವ ದೇವರ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಅವರ ಕೈಗೆಲಸವನ್ನು ಲಕ್ಷಿಸುವುದಿಲ್ಲ.