Isaiah 5:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು. ಯಾಕೆಂದರೆ ಅವರು ನಿಜವಾಗಿಯೂ ನನ್ನನ್ನು ಅರಿತಿಲ್ಲ. ಇಸ್ರೇಲಿನಲ್ಲಿ ವಾಸಿಸುವ ಕೆಲವು ಜನರು ಈಗ ಪ್ರಮುಖರಾಗಿದ್ದಾರೆ. ತಮ್ಮ ಅನಾಯಾಸದ ಜೀವಿತದಲ್ಲಿ ಆನಂದಿಸುತ್ತಾರೆ. ಆದರೆ ಆ ಗಣ್ಯವ್ಯಕ್ತಿಗಳೆಲ್ಲಾ ಬಾಯಾರಿಕೆಯಿಂದಲೂ ಹಸಿವೆಯಿಂದಲೂ ನರಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.
Kannada BSI Bible 2016
ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವದು ಖಂಡಿತ; ಘನವಂತರು ಹಸಿಯುವರು, ಸಾಮಾನ್ಯರು ಬಾಯಾರುವರು.
Kannada Bible (KNCL) BSI 2016
ಈ ಕಾರಣ, ನನ್ನ ಜನರು ಬುದ್ಧಿಹೀನರಂತೆ ಸೆರೆಹೋಗುವುದು ನಿಶ್ಚಯ. ಅವರ ಮುಖಂಡರು ಹಸಿವಿನಿಂದ ಸಾಯುವರು. ಅವರಲ್ಲಿ ಜನಸಾಮಾನ್ಯರು ಬಾಯಾರಿ ಸೊರಗಿಹೋಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋದರು; ಅವರ ಘನವಂತರು ಹಸಿವಿನಿಂದ ಸಾಯುವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವುದು.