Isaiah 5:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅವರು ಸತ್ತು ಪಾತಾಳಕ್ಕೆ ಇಳಿದುಹೋಗುವರು. ಪಾತಾಳವು ತನ್ನ ಬಾಯನ್ನು ಅಗಲವಾಗಿ ತೆರೆದು ಅವರನ್ನೆಲ್ಲಾ ನುಂಗಿಬಿಡುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು.
Kannada BSI Bible 2016
ಹೀಗಿರುವದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ಮಹಿಮೆ, ಸಮೂ ಹವು, ಕೋಲಾಹಲ, ಉಲ್ಲಾಸಪಡುವದು ಇವೆಲ್ಲವೂ ಅದರಲ್ಲಿ ಬೀಳುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಪಾತಾಳವು ಹೆಚ್ಚು ಆತುರದಿಂದ ಅಪಾರವಾಗಿ ಬಾಯಿತೆರೆಯಲು ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲಾ [ಅದರೊಳಗೆ] ಬಿದ್ದುಹೋಗುವವು.
Kannada Bible (KNCL) BSI 2016
ಪಾತಾಳವು ಹಸಿದು ಹಂಬಲಿಸುತ್ತಿದೆ. ಅಗಾಧವಾಗಿ, ಬಾಯಿ ತೆರೆದು ನಿಂತಿದೆ. ಜೆರುಸಲೇಮಿನ ಶ್ರೀಮಂತರು, ಸದ್ದುಗದ್ದಲ ಮಾಡುವ, ಹೆಮ್ಮೆಯಿಂದ ಹಿಗ್ಗುವ ಜನಸಾಮಾನ್ಯರು ಆ ಪಾತಾಳದೊಳಕ್ಕೆ ಬಿದ್ದುಹೋಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ವೈಭವ, ಸಮೂಹ, ಕೋಲಾಹಲ, ಉಲ್ಲಾಸಪಡುವುದು ಇವೆಲ್ಲವೂ ಅದರಲ್ಲಿ ಬೀಳುವುವು.