Isaiah 5:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು, “ದೇವರು ತಾನು ಮಾಡಲಿಕ್ಕಿರುವುದನ್ನು ಬೇಗನೇ ಮಾಡಿಮುಗಿಸಲಿ. ಆಗ ಏನಾಗುವದೋ ನೋಡೋಣ. ಆತನ ಯೋಜನೆ ಬೇಗನೆ ಕಾರ್ಯರೂಪಕ್ಕೆ ಬರಲಿ. ಆಗ ಆತನ ಯೋಜನೆ ಏನೆಂಬುದು ನಮಗೆ ತಿಳಿಯುವುದು” ಎಂದು ಹೇಳುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!
Kannada BSI Bible 2016
ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಆತನ ಕೆಲಸವನ್ನು ನೋಡಬೇಕು, ಅದನ್ನು ಬೇಗನೆ ನಡಿಸಲಿ, ಇಸ್ರಾಯೇಲ್ಯರ ಸದಮಲಸ್ವಾವಿುಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಸಮೀಪಿಸಿ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!
Kannada Bible (KNCL) BSI 2016
“ಸ್ವಾಮಿ ತ್ವರೆಮಾಡಲಿ, ತನ್ನ ಕಾರ್ಯವನ್ನು ತುರ್ತಾಗಿ ನಡೆಸಲಿ, ನೋಡೋಣ; ಇಸ್ರಯೇಲಿನ ಪರಮ ಪಾವನ ಸ್ವಾಮಿಯ ಯೋಜನೆ ಶೀಘ್ರವಾಗಿ ಕೈಗೂಡಲಿ, ಆಗ ಪರಿಗ್ರಹಿಸೋಣ” ಎಂದು ಹೇಳುವ ಜನರಿಗೆ ಧಿಕ್ಕಾರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಅವರ ಕೆಲಸವನ್ನು ನೋಡುವಂತೆ, “ದೇವರು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ. ನಾವು ಇಸ್ರಾಯೇಲಿನ ಪರಿಶುದ್ಧರ ಆಲೋಚನೆಯನ್ನು ತಿಳಿದುಕೊಳ್ಳುವ ಹಾಗೆ ಅದು ಸಮೀಪಿಸಿ ಬರಲಿ ಎಂದು ಹೇಳುವವರಿಗೆ ಕಷ್ಟ!”