Isaiah 5:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಜನರು ಒಳ್ಳೆಯವುಗಳನ್ನು ಕೆಟ್ಟವುಗಳೆಂದೂ ಕೆಟ್ಟವುಗಳನ್ನು ಒಳ್ಳೆಯವುಗಳೆಂದೂ ಹೇಳುತ್ತಾರೆ. ಅವರು ಬೆಳಕನ್ನು ಕತ್ತಲೆಯೆಂದೂ ಕತ್ತಲೆಯನ್ನು ಬೆಳಕೆಂದೂ ಅನ್ನುತ್ತಾರೆ. ಅವರು ಸಿಹಿಯನ್ನು ಕಹಿಯೆಂದೂ ಕಹಿಯನ್ನು ಸಿಹಿಯೆಂದೂ ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!
Kannada BSI Bible 2016
ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ!
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ಕೆಟ್ಟದ್ದನ್ನು ಒಳ್ಳೇದೆಂದೂ ಒಳ್ಳೇದನ್ನು ಕೆಟ್ಟದ್ದೆಂದೂ ಬೋಧಿಸಿ ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸಿ ಕಹಿಯು ಸಿಹಿ, ಸಿಹಿಯು ಕಹಿ ಎಂದು ಸ್ಥಾಪಿಸುವವರ ಗತಿಯನ್ನು ಏನೆಂದು ಹೇಳಲಿ!
Kannada Bible (KNCL) BSI 2016
ಕೆಟ್ಟದ್ದನ್ನು ಒಳ್ಳೆಯದೆಂದೂ ಒಳ್ಳೆಯದನ್ನು ಕೆಟ್ಟದ್ದೆಂದೂ ಬೋಧನೆ ಮಾಡುವವರಿಗೆ ಧಿಕ್ಕಾರ! ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸುವಂಥವರಿಗೆ ಧಿಕ್ಕಾರ! ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿಯೆಂದೂ ವಾದಿಸುವಂಥವರಿಗೆ ಧಿಕ್ಕಾರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೇಡಿಗೆ ಮೇಲೆಂದೂ, ಮೇಲಿಗೆ ಕೇಡೆಂದೂ ಕರೆದು, ಕತ್ತಲೆಯನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಯೆಂದೂ; ಕಹಿಯನ್ನು ಸಿಹಿ ಎಂದೂ, ಸಿಹಿಯನ್ನು ಕಹಿ ಎಂದೂ ಎಣಿಸುವವರಿಗೆ ಕಷ್ಟ!