Isaiah 5:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಿಗೆ ಹಣಕೊಟ್ಟರೆ, ಅಪರಾಧಿಯನ್ನೂ ಬಿಟ್ಟುಬಿಡುವರು; ಆದರೆ ಒಳ್ಳೆಯವರಿಗೆ ಸರಿಯಾದ ನ್ಯಾಯತೀರ್ಪು ದೊರಕಲು ಅವರು ಅವಕಾಶ ಕೊಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!
Kannada BSI Bible 2016
ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ ಮತ್ತು ನೀತಿಯನ್ನು ನೀತಿವಂತನಿಂದ ತೆಗೆದುಹಾಕುವವರಿಗೂ ಅಯ್ಯೋ!
Kannada BSI JV (ಕನ್ನಡ ಸತ್ಯವೇದವು J.V. (BSI))
ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನೆಂದು ಹೇಳಲಿ!
Kannada Bible (KNCL) BSI 2016
ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ, ನೀತಿಯನ್ನು ನೀತಿವಂತನಿಂದ ತೆಗೆದು ಹಾಕುವವರಿಗೂ ಕಷ್ಟ!