Isaiah 5:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.
Kannada BSI Bible 2016
ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೂಳೆಯನ್ನು ನುಂಗಿಬಿಡುವ ಹಾಗೂ ಒಣಹುಲ್ಲು ಬೆಂಕಿಯಲ್ಲಿ ಕುಗ್ಗುವಂತೆಯೂ ಅವರ ಬೇರು ಕೊಳೆತು ಅವರ ಹೂವು ದೂಳಾಗಿ ತೂರಿಹೋಗುವದು.
Kannada Bible (KNCL) BSI 2016
ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವರು ಸೇನಾಧೀಶ್ವರ ಯೆಹೋವ ದೇವರ ನಿಯಮವನ್ನು ನಿರಾಕರಿಸಿದ್ದರಿಂದಲೂ, ಇಸ್ರಾಯೇಲಿನ ಪರಿಶುದ್ಧರ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿ ಬಿಡುವ ಹಾಗೆಯೂ, ಜ್ವಾಲೆಯು ಒಣಹುಲ್ಲನ್ನು ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆಯುವಂತೆಯೂ, ಚಿಗುರು ಅದರ ಧೂಳಿನಂತೆಯೂ ಏರಿ ಹೋಗುವುವು.