Isaiah 5:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.
Kannada BSI Bible 2016
ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.
Kannada Bible (KNCL) BSI 2016
ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.