Isaiah 5:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎದ್ದು ನೋಡು! ದೂರದೇಶದ ಜನಾಂಗಗಳಿಗೆ ದೇವರು ಗುರುತನ್ನು ಕೊಡುತ್ತಿದ್ದಾನೆ. ಆತನು ಧ್ವಜವನ್ನೆತ್ತಿ ಆ ಜನರನ್ನು ಸಿಳ್ಳುಹಾಕಿ ಕರೆಯುತ್ತಿದ್ದಾನೆ. ಶತ್ರುಗಳು ದೂರದೇಶದಿಂದ ಬರುತ್ತಿದ್ದಾರೆ. ಅವರು ಬೇಗನೆ ನಿನ್ನ ದೇಶವನ್ನು ಪ್ರವೇಶಿಸುವರು. ಅವರು ಬಹುವೇಗವಾಗಿ ಬರುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು. ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ.
Kannada BSI Bible 2016
ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ ಅವರನ್ನು ಭೂಲೋಕದ ಅಂಚಿನಲ್ಲಿಂದ ಸಿಳ್ಳುಹಾಕಿ ಕರೆಯುವನು; ಇಗೋ, ತ್ವರೆಪಟ್ಟು ವೇಗವಾಗಿ ಬರುತ್ತಾರೆ!
Kannada Bible (KNCL) BSI 2016
ದೂರದ ಜನಾಂಗಕ್ಕೆ ಸ್ವಾಮಿ ಧ್ವಜಾರೋಹಣ ಮಾಡುವರು ಗುರುತಾಗಿ, ಕರೆಯುವರವರನು ಜಗದ ಕಟ್ಟಕಡೆಯಿಂದ ಸೀಟಿಹಾಕಿ; ಬರುವರಾಗ ಆ ಜನರು ತ್ವರೆಮಾಡಿ, ವೇಗವಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಕಟ್ಟಕಡೆಯಿಂದ ಅವರಿಗೆ ಸೀಟಿ ಹಾಕುವರು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು,