Isaiah 5:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶತ್ರುಗಳು ಆಯಾಸಗೊಳ್ಳುವುದಿಲ್ಲ, ನೆಲಕ್ಕೆ ಬೀಳುವುದಿಲ್ಲ. ಅವರು ತೂಕಡಿಸುವುದಿಲ್ಲ, ನಿದ್ರೆ ಮಾಡುವುದಿಲ್ಲ. ಅವರ ಸೊಂಟಪಟ್ಟಿಯು ಆಯುಧದೊಂದಿಗೆ ಯಾವಾಗಲೂ ಸಿದ್ಧವಾಗಿರುವುದು. ಅವರ ಪಾದರಕ್ಷೆಗಳ ದಾರವು ಎಂದಿಗೂ ತುಂಡಾಗುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಯಾರೂ ಬಳಲಿ ಮುಗ್ಗರಿಸುವುದಿಲ್ಲ. ಯಾರೂ ತೂಕಡಿಸಿ ನಿದ್ರಿಸುವುದಿಲ್ಲ. ಅವರ ನಡುಕಟ್ಟು ಬಿಚ್ಚಿಲ್ಲ. ಅವರ ಕೆರದ ಬಾರು ಹರಿಯುವುದಿಲ್ಲ.
Kannada BSI Bible 2016
ಅವರಲ್ಲಿ ಯಾರೂ ದಣಿದು ಮುಗ್ಗರಿಸರು; ಅಥವಾ ಅವರು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ, ಇಲ್ಲವೆ ಅವರ ನಡುಕಟ್ಟು ಬಿಚ್ಚಿಕೊಳ್ಳುವದಿಲ್ಲ. ಕೆರದ ಬಾರು ಹರಿಯುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಯಾರೂ ಬಳಲಿ ಮುಗ್ಗರಿಸರು, ಯಾರೂ ತೂಕಡಿಸಿ ನಿದ್ರಿಸರು; ಅವರ ನಡುಕಟ್ಟು ಬಿಚ್ಚಿಲ್ಲ, ಅವರ ಕೆರದ ಬಾರು ಕಿತ್ತಿಲ್ಲ;
Kannada Bible (KNCL) BSI 2016
ಬಳಲಿ ಹೋಗರು ಅವರಲ್ಲಿ ಯಾರೂ ಮುಗ್ಗರಿಸಿ, ನಿದ್ರಿಸರು ಯಾರೂ ತೂಕಡಿಸಿ, ಸಡಿಲವಾಗದವರ ನಡುಕಟ್ಟು, ಕಿತ್ತುಹೋಗದವರ ಕೆರದ ಕಟ್ಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲಿ ಯಾರೂ ದಣಿದು ಮುಗ್ಗರಿಸರು, ಅವರು ತೂಕಡಿಸುವುದಿಲ್ಲ, ನಿದ್ರಿಸುವುದಿಲ್ಲ, ಅವರ ನಡುಕಟ್ಟು ಬಿಚ್ಚಿಕೊಳ್ಳುವುದಿಲ್ಲ. ಕೆರದ ಬಾರು ಹರಿಯುವುದಿಲ್ಲ.