Isaiah 5:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶತ್ರುಗಳು ಆರ್ಭಟಿಸುವರು, ಆ ಆರ್ಭಟವು ಪ್ರಾಯದ ಸಿಂಹಗಳ ಗರ್ಜನೆಯಂತಿರುವುದು. ಶತ್ರುಗಳು ಹೂಂಕರಿಸುತ್ತಾ ತಮ್ಮೊಂದಿಗೆ ಯುದ್ಧ ಮಾಡುತ್ತಿರುವವರನ್ನು ಹಿಡಿದುಬಿಡುವರು. ಜನರು ಹೋರಾಡಿ ಪಾರಾಗಲು ಪ್ರಯತ್ನಿಸುವರು. ಆದರೆ ಅವರನ್ನು ರಕ್ಷಿಸುವವರು ಯಾರೂ ಇರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸಿಂಹದಂತೆ ಘರ್ಜಿಸುತ್ತಾರೆ. ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ. ಗುರುಗುಟ್ಟುತ್ತಾ ಬೇಟೆ ಹಿಡಿದು ಹೊತ್ತುಕೊಂಡು ಹೋಗುತ್ತಾರೆ. ರಕ್ಷಿಸುವವರು ಯಾರೂ ಇಲ್ಲ.
Kannada BSI Bible 2016
ಅವರ ಘರ್ಜ ನೆಯು ಸಿಂಹದಂತೆ ಅದೆ. ಪ್ರಾಯದ ಸಿಂಹಗಳಂತೆ ಆರ್ಭಟಿಸುತ್ತಾರೆ; ಹೌದು, ಘರ್ಜಿಸುತ್ತಾ ಬೇಟೆ ಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಂಹದಂತೆ ಗರ್ಜಿಸುತ್ತಾರೆ, ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ, ಗುರುಗುಟ್ಟುತ್ತಾ ಬೇಟೆಹಿಡಿದು ಹೊತ್ತುಕೊಂಡು ಹೋಗುತ್ತಾರೆ, ರಕ್ಷಿಸುವವರು ಯಾರೂ ಇಲ್ಲ.
Kannada Bible (KNCL) BSI 2016
ಗರ್ಜಿಸುತಿಹರು ಸೈನಿಕರು ಸಿಂಹದಂತೆ, ಆರ್ಭಟಿಸುತಿಹರವರು ಪ್ರಾಯದ ಸಿಂಹಗಳಂತೆ, ಗುರುಗುಟ್ಟುತಿಹರು ಬೇಟೆ ಹಿಡಿದ ಕೇಸರಿಯಂತೆ. ಅದನ್ನೆತ್ತಿಕೊಂಡು ಓಡುತಿಹರು, ಬಿಡಿಸುವರಾರೂ ಇಲ್ಲದಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಗರ್ಜನೆಯು ಸಿಂಹ ಆರ್ಭಟಿಸಿದಂತಿದೆ. ಪ್ರಾಯದ ಸಿಂಹ ಆರ್ಭಟಿಸಿದಂತಿದೆ. ಹೌದು, ಗರ್ಜಿಸುತ್ತಾ ಬೇಟೆಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ, ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.