Isaiah 5:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನ ನುಡಿಗಳಿವು. ನಾನು ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ಈಗ ಅನೇಕ ಮನೆಗಳಿವೆ, ಆದರೆ ನಾನು ಖಂಡಿತವಾಗಿ ಹೇಳುವುದೇನೆಂದರೆ ಎಲ್ಲಾ ಮನೆಗಳು ಕೆಡವಲ್ಪಡುವವು. ಈಗ ಭವ್ಯವಾದ ಬಂಗಲೆಗಳಿವೆ, ಆದರೆ ಅವುಗಳೆಲ್ಲಾ ಬರಿದಾಗುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು.
Kannada BSI Bible 2016
ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನ ಒಂದು ಮಾತು ಬಿದ್ದಿತು, ನೋಡಿರಿ - ಸೊಗಸಾದ ಅನೇಕ ದೊಡ್ಡ ಮನೆಗಳು ವಾಸಿಸುವವರೇ ಇಲ್ಲದೆ ಖಂಡಿತವಾಗಿ ಹಾಳಾಗುವವು.
Kannada Bible (KNCL) BSI 2016
ಸೇನಾಧೀಶ್ವರಸ್ವಾಮಿಯಿಂದ ನಾನು ಕಿವಿಯಾರೆ ಕೇಳಿದಂತೆ ಹಲವಾರು ಮಂದಿರಗಳು ಬರಿದಾಗುವುವು. ಸುಂದರ ಹಾಗೂ ಸವಿಸ್ತಾರವಾದ ಭವನಗಳು ನಿವಾಸಿಗಳಿಲ್ಲದೆ ಪಾಳುಬೀಳುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ನನ್ನ ಕಿವಿಗಳಲ್ಲಿ ಹೇಳುವುದೇನೆಂದರೆ: “ನಿಜವಾಗಿಯೂ ದೊಡ್ಡ ಮನೆಗಳು ಬರಿದಾಗುವುವು ಸುಂದರ ಭವನಗಳು ನಿವಾಸಿಗಳಿಲ್ಲದೆ ಹಾಳಾಗುವುವು.