Isaiah 50:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.
Kannada BSI Bible 2016
ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.
Kannada Bible (KNCL) BSI 2016
ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ: ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.