Isaiah 50:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.
Kannada BSI Bible 2016
ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ, ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ತರ್ಜನದಿಂದಲೇ ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ; ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.
Kannada Bible (KNCL) BSI 2016
ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.