Isaiah 50:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ನನಗೆ ಬೋಧಿಸುವ ಸಾಮರ್ಥ್ಯವನ್ನು ಅನುಗ್ರಹಿಸಿದ್ದಾನೆ. ಈಗ ನಾನು ದುಃಖದಲ್ಲಿರುವ ಈ ಜನರಿಗೆ ಬೋಧಿಸುತ್ತಿದ್ದೇನೆ. ಪ್ರತೀ ಮುಂಜಾನೆ ವಿದ್ಯಾರ್ಥಿಯೋ ಎಂಬಂತೆ ಆತನು ನನ್ನನ್ನು ಎಬ್ಬಿಸಿ ನನಗೆ ಬೋಧಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.
Kannada BSI Bible 2016
ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ.
Kannada Bible (KNCL) BSI 2016
ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು ನಾನು ತಿಳಿಯುವ ಹಾಗೆ ಸಾರ್ವಭೌಮ ಯೆಹೋವ ದೇವರು ಶಿಕ್ಷಿತರ ನಾಲಿಗೆಯನ್ನು ನನಗೆ ಕೊಟ್ಟಿದ್ದಾರೆ. ಆತನು ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ, ಸುರಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಎಚ್ಚರಗೊಳಿಸುತ್ತಾರೆ.