Isaiah 50:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಬೆನ್ನಿಗೆ ಹೊಡೆಯಲೂ ನನ್ನ ಗಡ್ಡವನ್ನು ಕೀಳಲೂ ಅವರಿಗೆ ನನ್ನನ್ನು ಒಪ್ಪಿಸಿಕೊಡುತ್ತೇನೆ. ಅವರು ನನ್ನನ್ನು ಬೈದು ನನ್ನ ಮುಖಕ್ಕೆ ಉಗುಳಿದರೂ ನಾನು ನನ್ನ ಮುಖವನ್ನು ಅಡಗಿಸುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.
Kannada BSI Bible 2016
ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಡೆಯುವವರಿಗೆ ಬೆನ್ನುಕೊಟ್ಟು ಕೂದಲುಕೀಳುವವರಿಗೆ ಗಡ್ಡವನ್ನು ಒಡ್ಡಿದೆನು; ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಲಿಲ್ಲ.
Kannada Bible (KNCL) BSI 2016
ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಹೊಡೆಯುವವರಿಗೆ ಬೆನ್ನನ್ನೂ, ಕೂದಲು ಕೀಳುವವರಿಗೆ ನನ್ನ ಗಡ್ಡವನ್ನೂ ಒಡ್ಡಿದೆನು. ನನ್ನ ಮುಖವನ್ನು ನಿಂದೆಗೂ, ಉಗುಳುವಿಕೆಗೂ ಮರೆಮಾಡಲಿಲ್ಲ.