Isaiah 50:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ನನ್ನೊಂದಿಗಿದ್ದಾನೆ. ನಾನು ತಪ್ಪಿತಸ್ಥನಲ್ಲವೆಂದು ಆತನು ತೋರಿಸುವನು. ಆದ್ದರಿಂದ ಯಾರೂ ನನ್ನನ್ನು ಅಪರಾಧಿ ಎಂದು ಹೇಳಲಾಗುವದಿಲ್ಲ. ಯಾರಾದರೂ ನನ್ನನ್ನು ತಪ್ಪಿತಸ್ಥನೆಂದು ದೃಢಪಡಿಸಬೇಕೆಂದಿದ್ದರೆ ಅವರು ಮೊದಲು ನನ್ನ ಬಳಿಗೆ ಬರಲಿ, ನಮಗೆ ವಿಚಾರಣೆಯಾಗಲಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ. ನನಗೆ ಪ್ರತಿಕಕ್ಷಿಯು ಯಾರು? ಅವನು ನನ್ನ ಬಳಿಗೆ ಬರಲಿ.
Kannada BSI Bible 2016
ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ; ನನ್ನೊಂದಿಗೆ ಹೋರಾಡು ವವನು ಯಾರು? ನಾವು ಒಟ್ಟಿಗೆ ನಿಂತುಕೊಳ್ಳೋಣ, ನನ್ನ ಎದುರಾಳಿ ಯಾರು? ಅವನು ನನ್ನ ಸವಿಾಪಕ್ಕೆ ಬರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ನ್ಯಾಯಸ್ಥಾಪಕನು ಸಮೀಪದಲ್ಲಿದ್ದಾನೆ; ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು [ನ್ಯಾಯಾಸನದ ಮುಂದೆ] ನಿಂತುಕೊಳ್ಳುವ; ನನಗೆ ಪ್ರತಿಕಕ್ಷಿಯು ಯಾರು? ನನ್ನ ಬಳಿಗೆ ಬರಲಿ.
Kannada Bible (KNCL) BSI 2016
ನನ್ನ ಪರ ತೀರ್ಪುಕೊಡುವವನು ಇಹನು ಹತ್ತಿರದಲೆ ನನಗೆ ಪ್ರತಿಕಕ್ಷಿ ಯಾರೆ ಬರಲಿ ಮುಂದಕೆ. ನನ್ನೊಡನೆ ವ್ಯಾಜ್ಯಮಾಡಬಲ್ಲವನಾರೇ ನಿಲ್ಲಲಿ ನ್ಯಾಯಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೆ ನೀತಿ ನಿರ್ಣಯಿಸುವಾತನು ಸಮೀಪದಲ್ಲಿಯೇ ಇದ್ದಾನೆ, ನನ್ನೊಂದಿಗೆ ವ್ಯಾಜ್ಯವಾಡುವವರು ಯಾರು? ನಾವು ಪರಸ್ಪರ ಎದುರಿಸೋಣ! ನನ್ನ ಎದುರಾಳಿ ಯಾರು? ಅವನು ನನ್ನ ಸಮೀಪಕ್ಕೆ ಬರಲಿ.