Isaiah 50:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನನ್ನ ಒಡೆಯನು ಸಹಾಯ ಮಾಡುತ್ತಾನೆ. ಯಾರೂ ನನ್ನ ಮೇಲೆ ದೋಷಾರೋಪಣೆ ಹೊರಿಸಲಾಗದು. ಈ ಜನರೆಲ್ಲರೂ ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವರು, ನುಸಿಯು ಅವುಗಳನ್ನು ತಿಂದುಬಿಡುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ವಸ್ತ್ರದಂತಾಗುವರು. ಅವರನ್ನು ನುಸಿಯು ತಿಂದುಬಿಡುವುದು.
Kannada BSI Bible 2016
ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ವಸ್ತ್ರದಂತೆ ಜೀರ್ಣವಾಗುವರು; ಅವರನ್ನು ನುಸಿಯು ತಿಂದುಬಿಡುವದು.
Kannada Bible (KNCL) BSI 2016
ಇಗೋ, ಸ್ವಾಮಿ ಸರ್ವೇಶ್ವರ ನಿಂತಿಹರು ನನಗೆ ನೆರವಾಗಿ ನಿರ್ಣಯಿಸುವವನು ಯಾರು ನನ್ನನ್ನು ಅಪರಾಧಿಯಾಗಿ? ನುಸಿತಿಂದ ವಸ್ತ್ರದಂತೆ ಅಳಿದುಹೋಗುವರವರು ಜೀರ್ಣವಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಸಾರ್ವಭೌಮ ಯೆಹೋವ ದೇವರು ನನಗೆ ಸಹಾಯ ಮಾಡುವರು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು. ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವುದು.