Isaiah 51:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಳ್ಳೆಯವರಾಗಿ ಜೀವಿಸಲು ಬಹಳವಾಗಿ ಪ್ರಯತ್ನಿಸುತ್ತಿರುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ. ನಿಮ್ಮ ಪಿತೃವಾದ ಅಬ್ರಹಾಮನನ್ನೇ ದೃಷ್ಟಿಸಿ ನೋಡಿರಿ; ಆ ಬಂಡೆಯೊಳಗಿಂದಲೇ ನೀವು ತೆಗೆಯಲ್ಪಟ್ಟಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.
Kannada BSI Bible 2016
ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸದ್ಧರ್ಮನಿರತರಾದ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರಿ, ಯಾವ ಗುಂಡಿಯಿಂದ ತೋಡಲ್ಪಟ್ಟಿರಿ ಎಂಬದನ್ನು ನೋಡಿರಿ.
Kannada Bible (KNCL) BSI 2016
“ಸದ್ಧರ್ಮಾರ್ಥಿಗಳಾದ ಸರ್ವೇಶ್ವರನ ಶರಣರೇ ಕೇಳಿ: ನೀವು ಯಾವ ಬಂಡೆಗಲ್ಲಿನಿಂದ ರೂಪುಪಡೆದಿರಿ, ಯಾವ ಕಲ್ಲುಗುಂಡಿಯಿಂದ ಅಗೆಯಲ್ಪಟ್ಟಿರಿ, ಎಂಬುದನ್ನು ಪರಿಭಾವಿಸಿ ನೋಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿಯನ್ನು ಹಿಂಬಾಲಿಸುವವರೇ, ಯೆಹೋವ ದೇವರನ್ನು ಹುಡುಕುವವರೇ, ನನ್ನ ಕಡೆಗೆ ಕಿವಿಗೊಡಿರಿ. ನಿಮ್ಮನ್ನು ಯಾವ ಬಂಡೆಯೊಳಗಿಂದ ಒಡೆದು ಕಡಿದಿರುತ್ತಾರೋ ಮತ್ತು ಯಾವ ಗುಂಡಿಯೊಳಗಿಂದ ಅಗೆದಿರುತ್ತಾರೋ ಆ ಬಂಡೆಯಾದಾತನನ್ನು ನೋಡಿರಿ.