Isaiah 51:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಸಮುದ್ರವನ್ನು ಬತ್ತಿಸಿರುವೆ. ಮಹಾ ಆಳದ ಗುಂಡಿಗಳ ನೀರನ್ನು ನೀನು ಬತ್ತಿಸಿರುವೆ. ಅತ್ಯಂತ ಆಳವಾದ ಸಮುದ್ರದ ತಳವನ್ನು ನೀನು ರಸ್ತೆಯನ್ನಾಗಿ ಮಾಡಿರುವೆ. ನಿನ್ನ ಜನರು ಆ ರಸ್ತೆಯಲ್ಲಿ ಸಮುದ್ರವನ್ನು ದಾಟಿ ರಕ್ಷಿಸಲ್ಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುದ್ರವನ್ನೂ, ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ, ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದವನು ನೀನಲ್ಲವೋ?
Kannada BSI Bible 2016
ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುದ್ರವನ್ನೂ ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತಜನರು ಹಾದುಹೋಗುವದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದ ಬಾಹು ನೀನೇ ಹೌದು.
Kannada Bible (KNCL) BSI 2016
ಸಮುದ್ರ ಜನರಾಶಿಗಳನು ಬತ್ತಿಸಿದ ಬಾಹು ನೀನು ವಿಮುಕ್ತ ಜನ ಹಾಯುವಂತೆ ಸಮುದ್ರದಲಿ ದಾರಿಮಾಡಿದೆ ನೀನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುದ್ರವನ್ನೂ, ದೊಡ್ಡ ಅಗಾಧದ ನೀರನ್ನೂ ಬತ್ತಿಸಿ, ವಿಮುಕ್ತರಾದವರು, ಹಾದು ಹೋಗುವುದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?