Isaiah 51:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ತನ್ನ ಜನರನ್ನು ರಕ್ಷಿಸುತ್ತಾನೆ. ಅವರು ಚೀಯೋನಿಗೆ ಸಂತೋಷದಿಂದ ಮರಳಿ ಬರುತ್ತಾರೆ. ಅವರು ಬಹಳ ಸಂತೋಷಪಡುವರು. ಅವರ ಹರ್ಷವು ಅವರ ತಲೆಯ ಮೇಲೆ ಕಿರೀಟದಂತೆ ನಿತ್ಯಕಾಲಕ್ಕೂ ಇರುವುದು. ಅವರು ಹರ್ಷದಿಂದ ಹಾಡುವರು. ಅವರ ದುಃಖವೆಲ್ಲಾ ಬಹುದೂರವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.
Kannada BSI Bible 2016
ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.
Kannada Bible (KNCL) BSI 2016
ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಯೆಹೋವ ದೇವರು ವಿಮೋಚಿಸಿದವರು, ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.