Isaiah 51:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮಿನಲ್ಲಿ ಅನೇಕ ಜನರಿದ್ದರೂ ಅವರಲ್ಲಿ ಯಾರೂ ಅವಳಿಗಾಗಿ ನಾಯಕರಾಗಲಿಲ್ಲ. ಆಕೆಯು ಅನೇಕ ಮಕ್ಕಳನ್ನು ಪಡೆದವಳಾಗಿದ್ದರೂ ಆಕೆಯನ್ನು ನಡೆಸಲು ಮಾರ್ಗದರ್ಶಕರು ಯಾರೂ ಆಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ಹೆತ್ತ ಮಕ್ಕಳಲ್ಲಿ ಅವಳನ್ನು ನಡೆಸಿಕೊಂಡು ಹೋಗುವವನು ಯಾರೂ ಇಲ್ಲ. ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ.
Kannada BSI Bible 2016
ಅವಳು ಹೆತ್ತ ಎಲ್ಲಾ ಕುಮಾರರಲ್ಲಿ ಅವಳನ್ನು ನಡಿಸುವದಕ್ಕೆ ಒಬ್ಬನೂ ಇಲ್ಲ; ಇಲ್ಲವೆ ಅವಳು ಬೆಳೆ ಸಿದ ಎಲ್ಲಾ ಕುಮಾರರಲ್ಲಿ ಅವಳ ಕೈಯನ್ನು ಹಿಡಿ ಯುವವನು ಒಬ್ಬನೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆತ್ತ ಮಕ್ಕಳಲ್ಲೆಲ್ಲಾ ಅವಳನ್ನು ಕರೆದುಕೊಂಡು ಹೋಗುವವನು ಯಾರೂ ಇಲ್ಲ; ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ.
Kannada Bible (KNCL) BSI 2016
ಅವಳನ್ನು ಕರೆದುಕೊಂಡು ಹೋಗುವವನಾರೂ ಇಲ್ಲ, ಆಕೆ ಹೆತ್ತಾ ಮಕ್ಕಳೊಳು; ಅವಳ ಕೈಹಿಡಿದು ನಡೆಸುವವನು ಒಬ್ಬನೂ ಇಲ್ಲ, ಆಕೆ ಸಾಕಿದ ಕುವರರೊಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಹೆತ್ತ ಎಲ್ಲಾ ಪುತ್ರರಲ್ಲಿ ಅವಳನ್ನು ನಡೆಸುವುದಕ್ಕೆ ಒಬ್ಬನೂ ಇಲ್ಲ. ಅವಳು ಬೆಳೆಯಿಸಿದ ಎಲ್ಲಾ ಪುತ್ರರಲ್ಲಿ, ಅವಳ ಕೈಯನ್ನು ಹಿಡಿಯುವವನು ಒಬ್ಬನೂ ಇಲ್ಲ.