Isaiah 51:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮ ಮಾತೆಯಾದ ಸಾರಳನ್ನೂ ದೃಷ್ಟಿಸಿರಿ; ನಾನು ಕರೆದಾಗ ಅಬ್ರಹಾಮನು ಒಬ್ಬಂಟಿಗನಾಗಿದ್ದನು. ನಾನು ಅವನನ್ನು ಆಶೀರ್ವದಿಸಿ, ಅವನ ಸಂತಾನವನ್ನು ಅಭಿವೃದ್ಧಿಪಡಿಸಿ, ಅವನನ್ನು ಮಹಾಜನಾಂಗದ ಮೂಲಪುರುಷನನ್ನಾಗಿ ಮಾಡಿದೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.
Kannada BSI Bible 2016
ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ; ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು ಆಶೀರ್ವದಿಸಿ ಸಂತಾನದಿಂದ ಹೆಚ್ಚಿಸಿದೆನಲ್ಲವೆ.
Kannada Bible (KNCL) BSI 2016
ನೆನೆಯಿರಿ ನಿಮ್ಮ ಮೂಲಪುರುಷ ಅಬ್ರಹಾಮನನು ಅವನ ಸತಿ ಸಾರಳನು. ಅಬ್ರಹಾಮನನ್ನು ನಾ ಕರೆದಾಗ ಆತನು ಒಬ್ಬಂಟಿಗನು ಆಶೀರ್ವಾದದಿ ನಾ ಬೆಳೆಸಿದೆ ಆತನ ಸಂತಾನವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ನಾನು ಅವನನ್ನು ಕರೆದಾಗ ಅವನು ಒಬ್ಬನೇ ಮನುಷ್ಯ, ನಾನು ಅವನನ್ನು ಆಶೀರ್ವದಿಸಿ, ವೃದ್ಧಿಗೊಳಿಸಿದೆನು.