Isaiah 51:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನನ್ನ ಜನರೇ, ನನ್ನ ಮಾತನ್ನು ಕೇಳಿರಿ. ನನ್ನ ಕಟ್ಟಳೆ ಮತ್ತು ನ್ಯಾಯ ಬೆಳಕಿನಂತಿದ್ದು ಹೇಗೆ ಜೀವಿಸಬೇಕೆಂಬುದನ್ನು ಜನರಿಗೆ ತೋರಿಸುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.
Kannada BSI Bible 2016
ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.
Kannada Bible (KNCL) BSI 2016
ಆಲಿಸಿರಿ ನನ್ನ ಜನರೆ, ಕಿವಿಗೊಡಿ ನನ್ನ ಪ್ರಜೆಗಳೆ: ಧರ್ಮೋಪದೇಶ ಹೊರಡುವುದು ರಾಷ್ಟ್ರಗಳಿಗೆ ನನ್ನಿಂದಲೆ; ಬೆಳಗುವುದು ಜಗಜ್ಯೋತಿಯಾಗಿ ನನ್ನ ನ್ಯಾಯಬೋಧೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಜನರೇ, ಕೇಳಿರಿ. ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ. ಏಕೆಂದರೆ ನಿಯಮವು ನನ್ನಿಂದ ಹೊರಡುವುದು ಮತ್ತು ನನ್ನ ನ್ಯಾಯವನ್ನು ಜನಾಂಗಕ್ಕೆ ಬೆಳಕನ್ನಾಗಿ ಮಾಡುವೆನು.