Isaiah 51:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನ್ಯಾಯವಂತನೆಂದು ನಿಮಗೆ ಬೇಗನೆ ತೋರಿಸುವೆನು. ನಿಮ್ಮನ್ನು ಬೇಗನೆ ರಕ್ಷಿಸುವೆನು. ನಾನು ನನ್ನ ಸಾಮರ್ಥ್ಯದಿಂದ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವೆನು. ದೂರದೇಶದವರು ನನಗೋಸ್ಕರ ಕಾಯುತ್ತಿದ್ದಾರೆ. ಅವರು ತಮ್ಮ ರಕ್ಷಣೆಗಾಗಿ ನನ್ನ ಶಕ್ತಿಯನ್ನು ಎದುರುನೋಡುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು, ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.
Kannada BSI Bible 2016
ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ರಕ್ಷಣಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವದು; ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.
Kannada Bible (KNCL) BSI 2016
ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ನೀತಿಯು ತ್ವರೆಯಾಗಿ ಸಮೀಪಿಸಿತು. ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ಕೈ ಜನಾಂಗಕ್ಕೆ ನ್ಯಾಯವನ್ನು ತೀರಿಸುವುದು. ನನ್ನ ಭುಜದ ಮೇಲೆ ಭರವಸೆ ಇಟ್ಟು, ದ್ವೀಪಗಳು ನನಗೋಸ್ಕರ ಕಾದುಕೊಂಡಿರುತ್ತವೆ.