Isaiah 51:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರಲೋಕದ ಕಡೆಗೆ ದೃಷ್ಟಿಸಿರಿ. ನಿಮ್ಮ ಸುತ್ತಲೂ ಇರುವ ಭೂಮಿಯನ್ನು ನೋಡಿರಿ. ಹೊಗೆಯ ಮೋಡದಂತೆ ಆಕಾಶವು ಇಲ್ಲದೆಹೋಗುವದು. ಭೂಮಿಯು ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವುದು. ಭೂಮಿಯ ಮೇಲಿರುವ ಜನರು ಸಾಯುವರು. ಆದರೆ ನನ್ನ ರಕ್ಷಣೆಯು ನಿರಂತರವಾಗಿರುವದು. ನನ್ನ ಕರುಣೆಯು ಅಂತ್ಯವಾಗದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.
Kannada BSI Bible 2016
ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ; ಆಕಾಶವು ಹೊಗೆಯಂತೆ ಚದರಿ ಹೋಗುವದು, ಭೂವಿುಯು ವಸ್ತ್ರದ ಹಾಗೆ ಜೀರ್ಣವಾಗುವದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು; ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವದು, ನನ್ನ ರಕ್ಷಣಧರ್ಮದ ಕಾರ್ಯಕ್ಕೆ ಭಂಗವೇ ಇಲ್ಲ.
Kannada Bible (KNCL) BSI 2016
ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಏಕೆಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವುವು. ಭೂಮಿಯು ಹಳೆಯ ಬಟ್ಟೆಯಂತಾಗುವುದು ಮತ್ತು ಅದರಲ್ಲಿ ವಾಸಿಸುವವರು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವುದು, ನನ್ನ ನೀತಿಯು ಎಂದಿಗೂ ರದ್ದಾಗದು.