Isaiah 51:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.
Kannada BSI Bible 2016
ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವದು, ಹುಳವು ಅವರನ್ನು ಉಣ್ಣೆಯಂತೆ ಮೆದ್ದುಬಿಡುವದು;
Kannada Bible (KNCL) BSI 2016
“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿಯನ್ನು ಅರಿತು, ನನ್ನ ನಿಯಮವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ, ನನಗೆ ಕಿವಿಗೊಡಿರಿ. ಮನುಷ್ಯರ ನಿಂದೆಗೆ ಭಯಪಡಬೇಡಿರಿ, ಅವರ ದೂಷಣೆಗೆ ಹೆದರಬೇಡಿರಿ.