Isaiah 51:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಭುಜಬಲವೇ, ಎಚ್ಚರಗೊಳ್ಳು ಎಚ್ಚರಗೊಳ್ಳು, ಬಲವನ್ನು ಹೊಂದಿಕೊ! ಪುರಾತನ ಕಾಲದಲ್ಲಿ ಮಾಡಿದಂತೆಯೇ ನಿನ್ನ ಶಕ್ತಿಯನ್ನು ತೋರು. ನಿನ್ನ ಶಕ್ತಿಯಿಂದ ನೀನು ರಹಬನ್ನು ಸೋಲಿಸಿರುವೆ. ದೈತ್ಯಾಕಾರದ ಮೃಗವನ್ನು ಸೋಲಿಸಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?
Kannada BSI Bible 2016
ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;
Kannada Bible (KNCL) BSI 2016
ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?