Isaiah 52:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚೀಯೋನೇ, ಎಚ್ಚರಗೊಳ್ಳು, ಎದ್ದೇಳು! ನಿನ್ನ ಉಡುಪನ್ನು ಹಾಕಿಕೊ; ನಿನ್ನ ಪ್ರತಾಪವನ್ನು ಧರಿಸಿಕೊ. ಪರಿಶುದ್ಧ ಜೆರುಸಲೇಮೇ, ಎದ್ದುನಿಲ್ಲು. ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನಲ್ಲಿಗೆ ಮತ್ತೇ ಪ್ರವೇಶಿಸರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.
Kannada BSI Bible 2016
ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಚಂದದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡರು.
Kannada Bible (KNCL) BSI 2016
ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ವೈಭವದ ಉಡುಪುಗಳನ್ನು ಹಾಕಿಕೋ ಏಕೆಂದರೆ ಇಂದಿನಿಂದ ಸುನ್ನತಿ ಇಲ್ಲದವರೂ, ಅಶುದ್ಧರೂ ನಿನ್ನೊಳಗೆ ಬರುವುದಿಲ್ಲ.