Isaiah 52:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!
Kannada BSI Bible 2016
ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವದನ್ನೂ ಮುಟ್ಟದಿರಿ, ಅದರ ಮಧ್ಯದೊಳಗಿಂದ ತೆರಳಿರಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!
Kannada Bible (KNCL) BSI 2016
ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ. ಅವಳ ಮಧ್ಯದಿಂದ ಹೊರಗೆ ಹೋಗಿರಿ. ಯೆಹೋವ ದೇವರ ದೇವಾಲಯದ ಪಾತ್ರೆಗಳನ್ನು ಹೊರುವವರೇ, ನೀವು ಶುದ್ಧರಾಗಿರಿ.