Isaiah 52:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಬಾಬಿಲೋನಿನಿಂದ ಹೊರಗೆ ಬರುವಿರಿ. ತ್ವರೆಪಟ್ಟು ಬರುವಂತೆ ಅವರು ಬಲವಂತ ಮಾಡುವದಿಲ್ಲ. ನೀವು ಓಡಿ ಹೋಗುವಂತೆ ಅವರು ಒತ್ತಾಯಪಡಿಸುವದಿಲ್ಲ. ನೀವು ಹೊರಗೆ ನಡೆಯುವಿರಿ. ಯೆಹೋವನು ನಿಮ್ಮೊಂದಿಗೆ ನಡೆಯುವನು. ಯೆಹೋವನು ನಿಮ್ಮ ಮುಂದೆ ಇರುವನು. ಇಸ್ರೇಲರ ದೇವರು ನಿಮ್ಮ ಹಿಂದೆಯೂ ಇರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ. ಯೆಹೋವನು ನಿಮಗೆ ಮುಂಬಲವಾಗಿ ಮುಂದೆ ಹೋಗುವನು. ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಕಾಯುವನು.
Kannada BSI Bible 2016
ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ; ಯೆಹೋವನು ನಿಮಗೆ ಮುಂಬಲವಾಗಿ ಮುಂದರಿಯುವನು, ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಇರುವನು.
Kannada Bible (KNCL) BSI 2016
ಅವಸರವಾಗಿ ನೀವು ಹೊರಡಬೇಕಿಲ್ಲ ನೆಗೆನೆಗೆದು ನೀವು ಓಡಬೇಕಿಲ್ಲ. ಹೋಗುವನು ಸರ್ವೇಶ್ವರ ನಿಮಗೆ ಮುಂಬಲವಾಗಿ, ನಿಮಗಿರುವನು ಇಸ್ರಯೇಲ್ ದೇವರು ಹಿಂಬಲವಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ತ್ವರೆಯಾಗಿ ಹೋಗುವುದಿಲ್ಲ, ಓಡಿ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರೇ ನಿಮ್ಮ ಮುಂದೆ ಹೋಗುವರು, ಇಸ್ರಾಯೇಲಿನ ದೇವರು ನಿಮ್ಮ ಹಿಂದೆ ಕಾವಲು ಕಾಯುವರು.