Isaiah 52:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಮೊದಲು ಈಜಿಪ್ಟಿನಲ್ಲಿ ನೆಲೆಸಲು ಹೋಗಿ, ನಂತರ ಅಲ್ಲಿ ಅವರು ದಾಸರಾದರು. ಆ ಬಳಿಕ ಅಶ್ಶೂರವು ಅವರನ್ನು ಗುಲಾಮರನ್ನಾಗಿ ಮಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಹೀಗೆಂದುಕೊಳ್ಳುತ್ತಾನೆ, “ನನ್ನ ಜನರು ಮೊಟ್ಟಮೊದಲು ಐಗುಪ್ತದಲ್ಲಿ ಇಳಿದುಕೊಳ್ಳಬೇಕೆಂದು ಹೋಗಿ ಅಲ್ಲಿ ಸೆರೆಯಾದರು. ಅಶ್ಶೂರ್ಯರು ಕಾರಣವಿಲ್ಲದೆ ಅವರನ್ನು ಬಾಧೆಪಡಿಸಿದರು.”
Kannada BSI Bible 2016
ಕರ್ತನಾದ ದೇವರು ಹೀಗ ನ್ನುತ್ತಾನೆ, ನನ್ನ ಜನರು ಪೂರ್ವದಲ್ಲಿ ಇಳುಕೊಳ್ಳುವ ದಕ್ಕೆ ಐಗುಪ್ತಕ್ಕೆ ಹೋದರು; ಅಶ್ಶೂರಿನವರು ಕಾರಣ ವಿಲ್ಲದೆ ಅವರನ್ನು ಹಿಂಸಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಹೀಗಂದುಕೊಳ್ಳುತ್ತಾನೆ - ನನ್ನ ಜನರು ಮೊಟ್ಟಮೊದಲು ಐಗುಪ್ತದಲ್ಲಿ ಇಳಿದುಕೊಳ್ಳಬೇಕೆಂದು ಹೋಗಿ [ಅಲ್ಲಿ ಸೆರೆಯಾದರು]; ಅಶ್ಶೂರ್ಯರು ಹಕ್ಕಿಲ್ಲದೆ ಅವರನ್ನು ಬಾಧೆಪಡಿಸಿದರು.
Kannada Bible (KNCL) BSI 2016
ದೇವರಾದ ಸರ್ವೇಶ್ವರ ಹೇಳಿಕೊಳ್ಳುವುದೇನೆಂದರೆ: “ಹಿಂದೆ ನನ್ನ ಜನರು ಈಜಿಪ್ಟಿನಲ್ಲೆ ಇಳಿದುಕೊಳ್ಳಲು ಹೋದರು. ಕೊನೆಗೆ ಅಸ್ಸೀರಿಯರು ಅವರನ್ನು ನಿಷ್ಕಾರಣವಾಗಿ ಹಿಂಸಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನನ್ನ ಜನರು ಪೂರ್ವದಲ್ಲಿ ಇಳುಕೊಳ್ಳುವುದಕ್ಕೆ ಈಜಿಪ್ಟಿಗೆ ಹೋದರು. ಅಸ್ಸೀರಿಯದವರು ಕಾರಣವಿಲ್ಲದೆ ಅವರಿಗೆ ಬಾಧೆಪಡಿಸಿದರು.