Isaiah 53:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;
Kannada BSI Bible 2016
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;
Kannada Bible (KNCL) BSI 2016
ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.