Isaiah 53:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.
Kannada BSI Bible 2016
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.
Kannada Bible (KNCL) BSI 2016
ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.